hiಕರಿಮೆಣಸು ಒಂದು ಅಪ್ಪು ಸಸ್ಯ. ಬಳ್ಳಿಯ ಗಂಟುಗಳಲ್ಲಿ ಬೇರು ಮೂಡುತ್ತವೆ. ಬೇರುಗಳು ಒಂದೊ ಆಧಾರ ಸಸ್ಯವನ್ನು ಅಪ್ಪುತ್ತವೆ ಅಥವಾ ಮಣ್ಣಿನಲ್ಲಿ ಇಳಿಯುತ್ತವೆ. ಈ ಬೇರುಗಳು ಮಣ್ಣು ಅಥವಾ ಮರದಕಾಂಡದಿಂದ ಪೋಷಕಾಂಶಗಳನ್ನು ಪಡೆಯುತ್ತವೆ. ಹೂವುಗಳು ಸೂಕ್ಷ್ಮವಾಗಿದ್ದು ಗೆರೆಗಳ ಮೇಲೆ ಮೂಡುತ್ತವೆ. ಗೆರೆಗಳು ಎಳತಾದ ಎಲೆಯ ಸಂದಿಯಲ್ಲಿ ಹುಟ್ಟುತ್ತವೆ. ಎಳೆ ಗೆರೆಗಳು ೪ ರಿಂದ ೮ ಸೆಂ.ಮೀ ಉದ್ದವಾಗಿದ್ದು ಪೂರ್ಣ ಬೆಳೆದ ಗೆರೆಯು ೭ ರಿಂದ ೧೫ ಸೆಂ.ಮೀ ಉದ್ದವಾಗಿರುತ್ತವೆ. ಬಳ್ಳಿಯು ಫಲವತ್ತಾದ ಹಾಗು ಪಸೆ ಇರುವ ಮಣ್ಣಿನಲ್ಲಿ ಬೆಳೆಯುತ್ತದೆ. ಸ್ವಾಭಾವಿಕವಾಗಿ ಹಣ್ಣಿನಿಂದ ಹಾಗು ಕಾಂಡದಿಂದ ಬರುವ ಬಳ್ಳಿಯಿಂದ ಸಂತಾನಭಿವೃದ್ಧಿಯಾಗುತ್ತದೆ. ಕೃಷಿ ಮಾಡುವವರು ಬಳ್ಳಿಯನ್ನು ೧ ಮೀ ಉದ್ದಕ್ಕೆ ಕತ್ತರಿಸಿ ನಾಟಿ ಮಾಡುತ್ತಾರೆ. ಗಟ್ಟಿ ಕಾಂಡದ ಸಸ್ಯಗಳ ಮೇಲೆ ಇವು ಬೇಗ ಬೆಳೆಯುತ್ತವೆ. ಉತ್ತಮ ಗಾಳಿ ಬೆಳಕು ಬಳ್ಳಿಗೆ ಅವಶ್ಯ, ಹಾಗೇಯೆ ಸ್ವಲ್ಪ ನೆರಳು ಕೂಡ ಅವಶ್ಯ. ಬಳ್ಳಿಯು ೪ರಿಂದ ೫ ವರ್ಷಗಳಲ್ಲಿ ಫಲ ನೀಡಲು ಪ್ರಾರಂಭಿಸುತ್ತದೆ. ಗೆರೆಯಲ್ಲಿ
ಒಂದೆರಡು ಕಾಳುಗಳು ಹಣ್ಣಾದಾಗ ಕೊಯ್ಲು ಪ್ರಾರಂಭಿಸಬಹುದು. ಕಾಳು ಹಣ್ಣಾದಾಗ ಕೆಂಪು ಬಣ್ಣಕ್ಕೆ ತಿರುಗುತ್ತದೆ. ಕೊಯ್ಲು ಮಾಡಿದ ಗೆರೆಗಳಿಂದ ಕಾಳನ್ನು ಬೇರ್ಪಡಿಸಿ ಬಿಸಿಲಿನಲ್ಲಿ ಒಣಗಿಸಬೇಕು. ಮೂರು ನಾಲ್ಕು ಬಿಸಿಲಿನ ನಂತರ ಕಾಳುಗಳು ಕಪ್ಪು ಬಣ್ಣಕ್ಕೆ ತಿರುಗುತ್ತವೆ.
ಕರಿಮೆಣಸನ್ನು ಇನ್ನೂ ಮಾಗದ ಹಸಿ ಕಾಳುಮೆಣಸಿನಿಂದ ತಯಾರಿಸುತ್ತಾರೆ. ಹಸಿಯಾದ ಕಾಳುಗಳನ್ನು ನೀರಿನಲ್ಲಿ ಸ್ವಲ್ಪ ಹೊತ್ತಿನವರೆಗೆ ಕುದಿಸಿ ನಂತರ ಶುಧ್ದೀಕರಿಸಿದ ಕಾಳನ್ನು ಒಣಗಿಸುತ್ತಾರೆ. ಈ ಕ್ರಿಯೆಯು ಕಾಳಿನಲ್ಲಿರುವ ಜೀವಕೋಶದ ಹೊರಪದರವನ್ನು ತುಂಡರಿಸಿ, ಕಾಳು ಬೇಗನೆ ಕಂದಲು[ಪಚನಕ] ಸಹಾಯ ಮಾಡುತ್ತದೆ. ಕಾಳುಗಳನ್ನು ಸಾಮಾನ್ಯವಾಗಿ ಬಿಸಿಲಿನಲ್ಲಿ ಅಥವ ಯಂತ್ರಗಳಲ್ಲಿ ಕೆಲವು ದಿನಗಳವರೆಗೆ ಒಣಗಿಸಲಾಗುತ್ತದೆ. ಈ ಸಮಯದಲ್ಲಿ ಕಾಳಿನ ಸುತ್ತಲಿರುವ ಹಣ್ಣು ಸಂಕುಚನಗೊಂಡು ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಹೀಗೆ ಒಣಗಿದ ಕಾಳನ್ನು ಕರಿಮೆಣಸು ಎನ್ನುತ್ತಾರೆ.
ಮೆಣಸಿನ ಹೊರ ಕವಚವನ್ನು ಬೇರ್ಪಡಿಸಿ ಉಳಿಯುವ ಕಾಳಿಗೆ ಬಿಳಿ ಮೆಣಸು ಎನ್ನುತ್ತಾರೆ. ಚೆನ್ನಾಗಿ ಹಣ್ಣಾದ ಮೆಣಸನ್ನು ಸುಮಾರು ಒಂದು ವಾರ ನೀರಿನಲ್ಲಿ ನೆನೆಸಿಟ್ಟರೆ, ಅದರ ಹಣ್ಣಿನಂಥಹ ಹೊರಕವಚ ಮೆತ್ತಗಾಗಿ ಕೊಳೆಯಲಾರಂಭಿಸುತ್ತದೆ. ನೀರಿನಿಂದ ಹೊರತೆಗೆದು ಉಜ್ಜಿದರೆ, ಈ ಹಣ್ಣಿನ ಅಂಶ ಹಾಗೂ ಬೀಜ ಬೇರ್ಪಡುತ್ತವೆ. ಹೀಗೆ ಬೇರ್ಪಟ್ಟ ಬೀಜವನ್ನು ಒಣಗಿಸಿದಾಗಿ ಬಿಳಿಮೆಣಸು ತಯಾರಾಗುತ್ತದೆ. ಇನ್ನೂ ಮಾಗದ ಮೆಣಸನ್ನು ಒಣಗಿಸಿ ತಯಾರಿಸಲಾದ ಕರಿಮೆಣಸಿನ ಹೊರ ಕವಚವನ್ನು ತಗೆದು ಬಿಳಿಮೆಣಸು ತಯಾರಿಸುವ ಪದ್ಧತಿಯೂ ಇದ
Help (F12 - switch between Kannada and English language)



